udupixpress
Home Trending ಉಡುಪಿ: ಇಂದು 10 ಮಂದಿ ಕೊರೊನಾ ಶಂಕಿತರು ಪತ್ತೆ: ಆಸ್ಪತ್ರೆಗೆ ದಾಖಲು 

ಉಡುಪಿ: ಇಂದು 10 ಮಂದಿ ಕೊರೊನಾ ಶಂಕಿತರು ಪತ್ತೆ: ಆಸ್ಪತ್ರೆಗೆ ದಾಖಲು 

ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 10 ಮಂದಿ‌ ಕೊರೊನಾ ಶಂಕಿತರನ್ನು ಗುರುತಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಪತ್ತೆಯಾದ 10 ಮಂದಿಯಲ್ಲಿ ಆರು ಮಂದಿಯಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದು, ಉಳಿದ ನಾಲ್ವರು ಕೊರೊನಾ ಸೋಂಕಿತರ ಸಂಪರ್ಕ ಹೊಂದಿದವರಾಗಿದ್ದಾರೆ. ಎಲ್ಲರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
error: Content is protected !!