ಕೊರೋನಾ  ನಿಯಂತ್ರಣ: ಅಧಿಕಾರಿಗಳಿಗೆ ರಜೆ ಇಲ್ಲ: ಜಿಲ್ಲಾಧಿಕಾರಿ

ಉಡುಪಿ ಮಾ.17: ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಚನೆಯಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಯಾವುದೇ ಅಧಿಕಾರಿ/ಸಿಬ್ಬಂದಿಗಳಿಗೆ ಈ ಅವಧಿಯಲ್ಲಿ ರಜೆ ಮಂಜೂರು ಮಾಡದಂತೆ ಮತ್ತು ಜಿಲ್ಲಾಧಿಕಾರಿ, ಎಸ್.ಪಿ.ಸಿಇಓ ಇವರ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟು ತೆರಳದಂತೆ ಹಾಗೂ ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.