ಶಂಕಿತ ಕೊರೊನಾ ವೈರಸ್ ರೋಗಿಯ ಪರೀಕ್ಷಾ ವರದಿ ನೆಗೆಟಿವ್: ಜಿಲ್ಲಾಧಿಕಾರಿ

ಉಡುಪಿ, ಮಾ.7: ಇಸ್ರೇಲ್‍ನಿಂದ ಉಡುಪಿಗೆ ಆಗಮಿಸಿದ್ದ ಸುಮಾರು  75 ವರ್ಷದ ವ್ಯಕ್ತಿಗೆ ಕೆಮ್ಮು ಹಾಗೂ ಶೀತದ ತೊಂದರೆಯಿರುವ ಖಚಿತ ಮಾಹಿತಿ ಅನ್ವಯ ಉಡುಪಿ ಜಿಲ್ಪಾಸ್ಪತ್ರೆಗೆ ದಾಖಲಾಗಿದ್ದು, ಶಂಕಿತ ಕೊರೊನಾ ವೈರಸ್ ಲಕ್ಷಣಗಳ ಹಿನ್ನೆಲೆಯಲ್ಲಿ, ಈ ರೋಗಿಯ ಥ್ರೋಟ್ ಸ್ವಾಬ್ ನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದು, ಇಂದು ಆ ವ್ಯಕ್ತಿಯ ವೈದ್ಯಕೀಯ ವರದಿಯು ಜಿಲ್ಲಾಡಳಿತ ಕೈ ಸೇರಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿರುವುದರಿಂದ,  ಜಿಲ್ಲೆಯ ಸಾರ್ವಜನಿಕರು ಯಾವುದೇ ಆತಂಕಗೊಳಗಾಗುವ ಅಗತ್ಯವಿಲ್ಲ. ಆದರೆ ಈ ರೋಗದ ಲಕ್ಷಣಗಳನ್ನು ತಿಳಿದುಕೊಂಡು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಸಾರ್ವಜನಿಕರು, ಕೊರೊನಾ ವೈರಸ್ ಕುರಿತಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ, ಆರೋಗ್ಯ ಇಲಾಖೆಯ ಉಚಿತ ಹೆಲ್ಪ್‍ಲೈನ್ ಸಂಖ್ಯೆ 104 ಅಥವಾ 080-2228541/ 22374658 ಅಥವಾ ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ ದೂ.ಸಂ. 0820-2525561 ನ್ನು ಸಂರ್ಕಿಸಬಹುದು. ಯಾವುದೇ ವದಂತಿಗಳಿಗೆ ಕಿವಿಗೊಟ್ಟು ಭಯ ಪಡುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.