ಉಡುಪಿ: ಇಂದಿನ ಕೊರೊನಾ ಪ್ರಕರಣಗಳ ವಿವರ ಹೀಗಿದೆ.!

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, 905 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 420, ಕುಂದಾಪುರ ತಾಲೂಕಿನಲ್ಲಿ 246, ಕಾರ್ಕಳ ತಾಲೂಕಿನಲ್ಲಿ‌ 233 ಹಾಗೂ ಹೊರ ಜಿಲ್ಲೆಯ ಆರು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6015 ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಕೂಡ ಮೂರು ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 70 ವರ್ಷದ ವೃದ್ಧ, 69 ವರ್ಷದ ಮಹಿಳೆ ಹಾಗೂ ಕುಂದಾಪುರ ತಾಲೂಕಿನ 78 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 318 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಮೇ 26ರಂದು ಜಿಲ್ಲೆಯಲ್ಲಿ 753 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆ ಮೂಲಕ ಕೋವಿಡ್ ಎರಡನೇ ಅಲೆಯಲ್ಲಿ ಈವರೆಗೆ ಒಟ್ಟು 26352 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 211101 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 32,495 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ 12 ಮಂದಿ ಬ್ಲಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಹೊರ ಜಿಲ್ಲೆಯ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಉಡುಪಿ ತಾಲೂಕಿನ ಓರ್ವ ವ್ಯಕ್ತಿ ಈಗಾಗಲೇ ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟಿದ್ದಾರೆ