ಉಡುಪಿ: ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಸಿಪಿಎಂ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, “ಚುನಾವಣಾ ಆಯೋಗದ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದ್ದು, ಚುನಾವಣಾ ಆಯೋಗವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದರು.

ಫಾರಂ-7 ಮೂಲಕ ನಡೆಯುತ್ತಿರುವ ಅಕ್ರಮಗಳ ಕುರಿತು ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದೂ ಆರೋಪಿಸಿದರು.

ಗ್ಯಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸದಿದ್ದರೆ ಅಕ್ಟೋಬರ್ 10ರಂದು ದೆಹಲಿಯಲ್ಲಿ ಹಾಗೂ ದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಸಿಪಿಎಂ ತಾಲೂಕು ಕಾರ್ಯದರ್ಶಿ ಶಶಿಧರ್ ಗೊಲ್ಲ ಹಾಗೂ ಸಂಜೀವ ಬಳ್ಕೂರು ಮಾತನಾಡಿದರು.