ಬಂಟ್ವಾಳದಲ್ಲಿ ಪಿಕಪ್ ವಾಹನ ಚಾಲಕನ ಬರ್ಬರ ಹತ್ಯೆ

ಬಂಟ್ವಾಳ: ಪಿಕಪ್ ವಾಹನ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಂದು ಮಂಗಳವಾರ (ಮೇ 27 )ನಡೆದಿದೆ.

ಕೊಳತ್ತಮಜಲು ನಿವಾಸಿ ಪಿಕಪ್ ವಾಹನ ಚಾಲಕನ ಸೋದರ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.

ರಹೀಮ್ ಜೊತೆ, ಇನ್ನೊಬ್ಬ ಕೂಡ ಇದ್ದು ಆತನನ್ನು ಕಡಿಯಲಾಗಿದೆ. ಆದರೆ ಆತನಿಗೆ ಕೈಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.