ಉಡುಪಿ: ಸೆ. 29ಕ್ಕೆ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ

ಉಡುಪಿ: ಪ್ರಸಕ್ತ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ, ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ 29 ರಂದು ಬೆಳಗ್ಗೆ 9.30ಗಂಟೆಯಿಂದ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

60 ವರ್ಷ ಮೇಲ್ಪಟ್ಟ ಕೋವಿಡ್ 1 ಮತ್ತು 2 ಲಸಿಕೆ ಪಡೆದಿರುವ ಹಿರಿಯ ನಾಗರಿಕರು, ಹಿರಿಯ ನಾಗರಿಕರ ಗುರುತು ಚೀಟಿ ಅಥವಾ ವಯಸ್ಸಿನ ಅಧಿಕೃತ ದಾಖಲೆಗಳೊಂದಿಗೆ ಈ ಕೆಳಕಂಡ ಸ್ಪರ್ಧೆಗಳಲ್ಲಿ ಭಾಗವಹಿಸಲು ಕೋರಲಾಗಿದೆ.

ಕ್ರೀಡಾ ಸ್ಪರ್ಧೆಗಳು: 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರ ಪ್ರತ್ಯೇಕ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್ ನಲ್ಲಿ ಎಸೆಯುವುದು ಮತ್ತು ಕೇರಂ.

ಸಾಂಸ್ಕೃತಿಕ ಸ್ಪರ್ಧೆಗಳು: 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರ ಪ್ರತ್ಯೇಕ ವಿಭಾಗದಲ್ಲಿ ಏಕಪಾತ್ರ ಅಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲೆ.

ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ‘ಸಿ’ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ- 576104. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 0820-2574810/811 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.