ನಾಗರ ಪಂಚಮಿಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ: ಡಿಸಿ ಜಿ. ಜಗದೀಶ್

ಉಡುಪಿ: ಜುಲೈ 25ರಂದು ನಡೆಯುವ ನಾಗರ ಪಂಚಮಿಯಂದು ನಾಗರ ಪೂಜೆ ಮಾಡಬಾರದೆಂದು ಡಿಸಿ ಹೇಳಿದ್ದಾರೆ ಎಂಬ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್19 ಭೀತಿ ಇರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಯಾವುದೇ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಣೆ ಮಾಡಲು ಅವಕಾಶವಿಲ್ಲ. ಅದರಂತೆ ನಾಗರ ಪಂಚಮಿಯನ್ನು ಸಾರ್ವಜನಿಕರು ಒಟ್ಟಿಗೆ ಸೇರಿ ಆಚರಣೆ ಮಾಡುವಂತಿಲ್ಲ. ಹಾಗಾಗಿ ಅವರವರ ಮನೆಯಲ್ಲಿ ನಾಗಪೂಜೆ, ನಾಗರಪಂಚಮಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.