ಉಡುಪಿ: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಈಚೆಗೆ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ ಯಾರು ಕೂಡ ಭಾಗವಹಿಸಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟ ಪಡಿಸಿದ್ದಾರೆ.
ಟಿವಿ ಮಾಧ್ಯಮಗಳಲ್ಲಿ ಜಿಲ್ಲೆಯಿಂದ 16 ಮಂದಿ ಭಾಗವಹಿಸಿದ್ದಾರೆ ಎಂಬ ಸುದ್ದಿ ಬರುತ್ತಿದ್ದು, ಇದು ಸಂಪೂರ್ಣ ಸುಳ್ಳಾಗಿದೆ. ಹಾಗಾಗಿ ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿ ತಿಳಿಸಿದ್ದಾರೆ.