ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರಧಾನ್ಯ ವಿತರಣೆ: ಜಿಲ್ಲಾಧಿಕಾರಿ

ಉಡುಪಿ, ಮೇ 6: ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ  ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ-2020ರ ಮಾಹೆಗೆ ಬಿಡುಗಡೆಯಾಗಿರುವ ಆಹಾರಧಾನ್ಯವನ್ನು ಮೇ 7 ರಿಂದ  ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಈ ಕೆಳಗಿನಂತೆ ವಿತರಿಸಲಾಗುವುದು.

ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ ಏಪ್ರಿಲ್ ಮತ್ತು ಮೇ ಮಾಹೆಯ ಬಾಬ್ತು ತಿಂಗಳಿಗೆ 5ಕಜಿಯಂತೆ ಒಟ್ಟು 10 ಕೆಜಿ  ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಪಿಹೆಚ್ ಹೆಚ್ ಕಾರ್ಡಿನ ಪ್ರತಿ ಸದಸ್ಯರಿಗೆ ಏಪ್ರಿಲ್ ಮತ್ತು ಮೇ ಮಾಹೆಯ ಬಾಬ್ತು ತಿಂಗಳಿಗೆ 5ಕಜಿಯಂತೆ ಒಟ್ಟು 10 ಕೆಜಿ  ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಪಿಹೆಚ್ ಹೆಚ್ ಪ್ರತಿ ಕಾರ್ಡಿಗೆ ಏಪ್ರಿಲ್ ಮತ್ತು ಮೇ ಮಾಹೆಯ ಬಾಬ್ತು ತಿಂಗಳಿಗೆ 2 ಕೆಜಿಯಂತೆ ಒಟ್ಟು 4 ಕೆಜಿ ಗೋಧಿಯನ್ನು ಉಚಿತವಾಗಿ ವಿತರಿಸಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಿರುವ ಪಿಹೆಚ್.ಹೆಚ್ (ಬಿಪಿಎಲ್) ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು  ಉಚಿತವಾಗಿ ವಿತರಿಸಲಾಗುವುದು, ಆಹಾರಧಾನ್ಯ ಪಡೆಯಲು ನೋಂದಾಯಿಸದೆ ಇರುವ ಎನ್.ಪಿ.ಹೆಚ್.ಹೆಚ್(ಎಪಿಎಲ್) ಏಕ ಸದಸ್ಯ ಪಡಿತರ ಚೀಟಿ ಕಾರ್ಡಿಗೆ 5 ಕೆಜಿ ಅಕ್ಕಿ ಮತ್ತು ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಕಾರ್ಡುಗಳಿಗೆ 10 ಕೆಜಿ ಅಕ್ಕಿ ಪ್ರತಿ ಕೆಜಿಗೆ. ರೂ 15 ರಂತೆ  ವಿತರಿಸಲಾಗುವುದು.  ಅಂತರ ರಾಜ್ಯ, ಅಂತರ-ಜಿಲ್ಲೆ ಪಡಿತರ ಚೀಟಿದಾರರು ಪೋರ್ಟಿಬಿಲಿಟಿಯಲ್ಲಿ ಆಹಾರಧಾನ್ಯ ಪಡೆಯಲು ಅವಕಾಶವಿದ್ದು, ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪಡಿತರ ಚೀಟಿದಾರರ ಆಧಾರ್ ದೃಢೀಕೃತ ಬೆರಳಚ್ಚು (ಆಧಾರ್ ಬಯೋಮೆಟ್ರಿಕ್), ಆಧಾರ್ ಓಟಿಪಿ, ಮೊಬೈಲ್ ಓಟಿಪಿ ದೃಢೀಕರಣದ ಮೂಲಕವೇ ಪಡಿತರ ವಿತರಿಸಲಾಗುವುದು. ಎಲ್ಲಾ ಪಡಿತರ ಚೀಟಿದಾರರು ಮೇ 25 ರೊಳಗೆ ಕಡ್ಡಾಯವಾಗಿ ಆಹಾರಧಾನ್ಯವನ್ನು ಪಡೆದುಕೊಳ್ಳುವಂತೆ ತಿಳಿಸಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರು ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಗಳನ್ನು ಹಾಕಿಕೊಂಡು ಹಾಗೂ ಬೆರಳಚ್ಚು ದೃಡೀಕರಣ ನೀಡುವ ಮೊದಲು ಸ್ಯಾನಿಟೈಸರ್ ಬಳಸಿ ಪಡಿತರ ಪಡೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.