ಭಾರೀ ಮಳೆ: ಅಗತ್ಯವಿರುವೆಡೆ ಶಾಲೆಗಳಿಗೆ ರಜೆ ಸಾರಲು ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದ್ದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ. ಆದರೆ ಅಗತ್ಯ ಇರುವಲ್ಲಿ ಆಯಾ ಶಾಲಾ ಹಂತದಲ್ಲೇ ರಜೆ ಸಾರಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ.
ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ.