ಉನ್ನತಿ ಕೆರಿಯರ್ ಅಕಾಡೆಮಿಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ

ಉಡುಪಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಬುಧವಾರದಂದು ಭೇಟಿ ನೀಡಿ ಅಲ್ಲಿನ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಭೂತ ಸೌಕರ್ಯಗಳು ಹಾಗೂ ತರಬೇತಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ನಿರ್ದೇಶಕಿ ಶ್ರೀಮತಿ ಪೌರ್ಣಮಿ ಪ್ರೇಮ್ ಶೆಟ್ಟಿ, ತರಬೇತುದಾರ ನವೀನ್ ನಾಯಕ್ ಉಪಸ್ಥಿತರಿದ್ದರು.