ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಹೆಚ್ಚು ಮಳೆಯಾಗುವ ಸಂಭಾವ್ಯತೆಯಲ್ಲಿ ಮುಂಜಾಗೃತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 1 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.