ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ವರ್ಗಾವಣೆ

ಉಡುಪಿ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿಯನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ 2015 ರಲ್ಲಿ‌ ಅಧಿಕಾರ ಸ್ವೀಕರಿಸಿದ್ದರು. ಅನಂತರ 2017 ಫೆ. 23 ರಂದು ಜಿಲ್ಲಾಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. ನೂತನ ಜಿಲ್ಲಾಧಿಕಾರಿಯಾಗಿ ಹುಬ್ಬಳ್ಳಿ-ಧಾರವಾಡದದ ಸ್ಪೆಶಲ್ ಪರ್ಪೋಸ್ ವೆಹಿಕಲ್ ಇದರ ಆಡಳಿತ ನಿರ್ದೇಶಕಿ ಹೆಪ್ಸಿಬಾ ರಾಣಿ‌ ಕೊರ್ಲಪತಿ ನಿಯೋಜನೆಗೊಂಡಿದ್ದಾರೆ.