ಉಡುಪಿ: ಬ್ಲ್ಯಾಕ್ ಫಂಗಸ್ ಗೆ ಜಿಲ್ಲೆಯಲ್ಲಿ ಮೊದಲ ಬಲಿ

ಉಡುಪಿ: ಕೋವಿಡ್ ಸೋಂಕಿನ ಆರ್ಭಟದ ಮಧ್ಯೆಯೇ ಕಪ್ಪು ಶಿಲೀಂದ್ರ (ಮ್ಯೂಕರ್ ಮೈಕೋಸಿಸ್) ಸೋಂಕು ಜಿಲ್ಲೆಯಲ್ಲಿ ಮೊದಲ ಬಲಿಯನ್ನು ಪಡೆದುಕೊಂಡಿದೆ.

ಸಂತೆಕಟ್ಟೆಯ 76 ವರ್ಷ ಪ್ರಾಯದ ಮಹಿಳೆ ಇಂದು ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟಿದ್ದಾರೆ. ಇವರು ನಗರದ ಆದರ್ಶ ಆಸ್ಪತ್ರೆಯಲ್ಲಿ ಸೋಂಕಿಗೆ ತುತ್ತಾಗಿ ಕಳೆದೊಂದು ವಾರದಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ಇದೇ ಆಸ್ಪತ್ರೆಯಲ್ಲಿ ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಪಡುಬಿದ್ರಿ ಸಮೀಪದ ನಂದಿಕೂರಿನ 45 ವರ್ಷದ ಪುರುಷರೊಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದ ಹರಿಹರ, ಹುಬ್ಬಳ್ಳಿ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಧಾರವಾಡ ಹಾಗೂ ರಾಣಿಬೆನ್ನೂರು ಜಿಲ್ಲೆಗಳ ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸಂಪೂರ್ಣ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಇಲಾಖೆ ಮಾಹಿತಿ‌ ನೀಡಿದೆ.

ಸದ್ಯ ಜಿಲ್ಲೆಯಲ್ಲಿ ಇಬ್ಬರು ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.