ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಹಾದಿಯಲ್ಲಿ ಸಾಗುತ್ತಿದ್ದು, ಇಂದು (ಜೂನ್ 5) 552 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಡುಪಿ ತಾಲೂಕಿನಲ್ಲಿ 208, ಕುಂದಾಪುರ ತಾಲೂಕಿನಲ್ಲಿ 139, ಕಾರ್ಕಳ ತಾಲೂಕಿನಲ್ಲಿ‌ 197 ಹಾಗೂ ಹೊರ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4323ಕ್ಕೆ ಇಳಿದಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 70 ವರ್ಷದ ವೃದ್ಧರೊಬ್ಬರು ಸೋಂಕಿನಿಂದ ಅಸುನೀಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 342 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಜೂನ್ 4ರಂದು ಜಿಲ್ಲೆಯಲ್ಲಿ 734 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆ ಮೂಲಕ ಕೋವಿಡ್ ಎರಡನೇ ಅಲೆಯಲ್ಲಿ ಈವರೆಗೆ ಒಟ್ಟು 33705 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 240930 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 38180 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬ್ಲ್ಯಾಕ್ ಫಂಗಸ್ ವಿವರ:
ಜಿಲ್ಲೆಯಲ್ಲಿ 9 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.