ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಇಂದು (ಜೂನ್ 7) 394 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಡುಪಿ ತಾಲೂಕಿನಲ್ಲಿ 207, ಕುಂದಾಪುರ ತಾಲೂಕಿನಲ್ಲಿ 110, ಕಾರ್ಕಳ ತಾಲೂಕಿನಲ್ಲಿ 70 ಹಾಗೂ ಹೊರ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4085 ಇಳಿದಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಕುಂದಾಪುರ ತಾಲೂಕಿನ 85 ವರ್ಷದ ವೃದ್ಧೆ ಹಾಗೂ 61 ವರ್ಷದ ವ್ಯಕ್ತಿ ಸೋಂಕಿನಿಂದ ಅಸುನೀಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 346 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಜೂನ್ 6ರಂದು ಜಿಲ್ಲೆಯಲ್ಲಿ 628 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆ ಮೂಲಕ ಕೋವಿಡ್ ಎರಡನೇ ಅಲೆಯಲ್ಲಿ ಈವರೆಗೆ ಒಟ್ಟು 34827 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 248381 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 39068 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಬ್ಲ್ಯಾಕ್ ಫಂಗಸ್ ವಿವರ:
ಇಂದು ಕುಂದಾಪುರ ತಾಲೂಕಿನ ಓರ್ವನಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಂಡಿದೆ. ಓರ್ವ ಸೋಂಕಿತ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಸದ್ಯ ಜಿಲ್ಲೆಯಲ್ಲಿ 10 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.