ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹಾವು ಏಣಿ ಆಟ ಮುಂದುವರಿದಿದ್ದು, ಇಂದು(ಜೂನ್ 3) ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇಂದು 580 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಡುಪಿ ತಾಲೂಕಿನಲ್ಲಿ 324, ಕುಂದಾಪುರ ತಾಲೂಕಿನಲ್ಲಿ 129, ಕಾರ್ಕಳ ತಾಲೂಕಿನಲ್ಲಿ‌ 123 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4533 ಕ್ಕೆ ಇಳಿದಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 338 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಜೂನ್ 2ರಂದು ಜಿಲ್ಲೆಯಲ್ಲಿ 923 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆ ಮೂಲಕ ಕೋವಿಡ್ ಎರಡನೇ ಅಲೆಯಲ್ಲಿ ಈವರೆಗೆ ಒಟ್ಟು 32,386 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 233823 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 37067 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬ್ಲ್ಯಾಕ್ ಫಂಗಸ್ ವಿವರ:
ಜಿಲ್ಲೆಯಲ್ಲಿ 10 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.