ಉಡುಪಿ: ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ, ಸಹಾಯಕ ಜಯರಾಮ್ ಲೋಕಾಯುಕ್ತ ಬಲೆಗೆ.

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರು ಉಡುಪಿ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.


ಈ ಇಬ್ಬರು ಆರೋಪಿಗಳು ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ 5000 ರಂತೆ ಒಟ್ಟು 10,000ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರ ಈ ಕುರಿತು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.


ಅದರಂತೆ ರೇಣುಕಾ ಉಡುಪಿಯಲ್ಲಿರುವ ತನ್ನ ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿರುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.