ಉಡುಪಿ:ಡಿಪ್ಲೋಮಾ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ:ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2026-27 ನೇ ಸಾಲಿನ ಉದ್ಯೋಗಾಧಾರಿತ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿ.ಪಿ.ಟಿ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿ.ಪಿ.ಎಂ.ಟಿ) – 3 ವರ್ಷಗಳ ಅವಧಿಯ ಕೋರ್ಸ್ಗಳ ಪ್ರವೇಶಾತಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾಗುವವರು ಆನ್‌ಲೈನ್ https://cipet26.onlineregistrationform.org/CIPET/
ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಇದರೊಂದಿಗೆ ಸಿಪೆಟ್ ಸಂಸ್ಥೆಯು ಉಚಿತ 3 ರಿಂದ 6 ತಿಂಗಳುಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯ
ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಅಡಿ ಆಯೋಜಿಸಲಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ
ಆಹಾರ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಮೊ.ನಂ: 9480253024, 9791431827 ಅಥವಾ ವೆಬ್‌ಸೈಟ್ www.cipet.gov.in ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರ ಕಚೇರಿ ಪ್ರಕಟಣೆ ತಿಳಿಸಿದೆ.