ಉಡುಪಿ:ಜೂನ್ 26 ರಂದು ನೇರ ಸಂದರ್ಶನ

ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ ರಿಟೇಲ್ ಪ್ರೈ.ಲಿ ಇಲ್ಲಿ ಜೂನ್ 26 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಎಮ್.ಬಿ.ಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.