ಉಡುಪಿ: ಸೈಕ್ಯಾಟ್ರಿಸ್ಟ್ ಹುದ್ದೆಗೆ ನೇರ ನೇಮಕಾತಿ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸೈಕ್ಯಾಟ್ರಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನವೆಂಬರ್ 9ರಂದು ಬೆಳಗ್ಗೆ 10.30 ರಿಂದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.