ಉಡುಪಿ: ಉಡುಪಿ ನಗರಸಭೆಯ ವಿವಿಧ ವಾರ್ಡ್ ವ್ಯಾಪ್ತಿಯಲ್ಲಿನ ವಸತಿ ಸಮುಚ್ಚಯ/ವಾಣಿಜ್ಯ ಮಳಿಗೆಯಿಂದ
ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗೆ ಬಿಡುತ್ತಿರುವುದರಿಂದ, ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ಹಾಗೂ ಪರಿಸರ ಮಾಲಿನ್ಯ ಉಂಟು ಮಾಡಿ ಮಲೇರಿಯಾ, ಡೆಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಆಸ್ಪದ ಉಂಟು ಮಾಡುತ್ತಿರುವುದು ಕಂಡು ಬಂದಿರುತ್ತದೆ.
ಈ ಬಗ್ಗೆ ಚರ್ಚಿಸುವ ಸಲುವಾಗಿ ಜುಲೈ 19 ರಂದು ಬೆಳಗ್ಗೆ 11 ಗಂಟೆಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಗರಸಭೆ
ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದ್ದು, ಸದ್ರಿ ಸಭೆಗೆ ವಸತಿ ಸಮುಚ್ಚಯದ ರೆಸಿಡೆನ್ಷಿಯಲ್ ವೆಲ್‌ಫೇರ್
ಅಸೋಸಿಯೇಷನ್‌ನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ವಾಣಿಜ್ಯ ಸಂಕೀರ್ಣಗಳ ಮಾಲೀಕರು ಕಡ್ಡಾಯವಾಗಿ ಭಾಗವಹಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಟಕಣೆ ತಿಳಿಸಿದೆ.












