ಉಡುಪಿ: ಜಿಲ್ಲೆಯಲ್ಲಿ ಇಂದು 270 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8245 ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 85 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 184 ಮಂದಿ ಸಹಿತ 269 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 5630 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2537 ಸಕ್ರಿಯ ಕೊರೊನಾ ಸೋಂಕಿತರಿದ್ದು, 1372 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1165 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
*ಓರ್ವ ಮಹಿಳೆ ಕೊರೊನಾಗೆ ಬಲಿ*
ಜಿಲ್ಲೆಯಲ್ಲಿ ಇಂದು ಕೊರೊನಾಗೆ ಒಂದು ಬಲಿಯಾಗಿದೆ. ಕಾರ್ಕಳ ತಾಲ್ಲೂಕಿನ 56 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ 79ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.