ಉಡುಪಿ: ಇಂದು 421 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 421 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8666 ಕ್ಕೆ ಏರಿಕೆಯಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 177 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 144 ಮಂದಿ ಸಹಿತ 321 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 5951 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇನ್ನೂ 2637 ಸಕ್ರಿಯ ಕೊರೊನಾ ಸೋಂಕಿತರಿದ್ದು, 1321 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1316 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.