ಉಡುಪಿ: ಕೇರಳಕ್ಕೆ ಪ್ರಯಾಣ ಮಾಡುವ ಕುರಿತಂತೆ ಜಿಲ್ಲಾಡಳಿತದಿಂದ ಸೂಚನೆ

ಉಡುಪಿ: ಕರ್ನಾಟಕಕ್ಕೆ ಆಗಮಿಸುವ ಕೇರಳದ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಪ್ರಸ್ತುತ ಕೋವಿಡ್ 19 ನೆಗೆಟಿವ್ RT-PCR ವರದಿಯನ್ನು ಹೊಂದಿದ್ದರೂ ಕರ್ನಾಟಕಕ್ಕೆ ಬಂದ ಮೇಲೆ ಪರಿಶೀಲಿಸಿದಾಗ ಕೋವಿಡ್ 19 RT-PCR ವರದಿಯು ಪಾಸಿಟಿವ್ ಬರುತ್ತಿದೆ.

ಇಂತಹ ಪ್ರಕರಣಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದ್ದು ಕೋವಿಡ್ -19 ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ಕೇರಳದಿಂದ ಆಗಮನಕ್ಕಾಗಿ ಸರಕಾರದಿಂದ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗುತ್ತಿದೆ. ಅದರಂತೆ ಈ ಕೆಳಗಿನಂತೆ ಸೂಚನೆಗಳನ್ನು ನೀಡಲಾಗಿದೆ.

ಸೂಚನೆಗಳು:
ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಆಡಳಿತಾಧಿಕಾರಿಗಳು/ ನರ್ಸಿಂಗ್ / ಪ್ಯಾರಾಮೆಡಿಕಲ್‌ನ/ ಪ್ರಾಂಶುಪಾಲರು ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳಿಗೆ 2021ರ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ಸೂಚನೆ ನೀಡಬೇಕು.

ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕಛೇರಿಗಳು, ಹೋಟೆಲ್‌ಗಳು, ಕಾರ್ಖಾನೆಗಳು, ಇತ್ಯಾದಿ ಎಲ್ಲಾ ಸಂಸ್ಥೆಗಳ ಮಾಲೀಕರು/ಆಡಳಿತಾಧಿಕಾರಿಗಳು ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಅಕ್ಟೋಬರ್-2021 ರ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ಸೂಚನೆ ನೀಡಬೇಕು.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ತುರ್ತು ಇಲ್ಲದಿದ್ದರೆ ಕೇರಳಕ್ಕೆ ಭೇಟಿ ನೀಡುವ ಯೋಜನೆಯನ್ನು ಅಕ್ಟೋಬರ್-2021ರ ಅಂತ್ಯದವರೆಗೆ ಮುಂದೂಡಬೇಕು. ಆ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.