ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಅವರ ಅಭಿನಂದನಾ ಸಮಾರಂಭವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಮಾರಂಭದ ಅಧ್ಯಕ್ಷತೆಯಲ್ಲಿ ಆಗಸ್ಟ್ 6ರ ಶುಕ್ರವಾರ ಮಧ್ಯಾಹ್ನ ಗಂಟೆ 3.30ಕ್ಕೆ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜರಗಲಿದೆ.
ಈ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಗಳ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಅಭಿನಂದನಾ ಸಮಾರಂಭದ ಪೂರ್ವಭಾವಿಯಾಗಿ ನೂತನ ಸಚಿವರನ್ನು ಮಧ್ಯಾಹ್ನ 2.30ಕ್ಕೆ ಹಿರಿಯಡ್ಕ ಪೇಟೆಯಲ್ಲಿ ಕಾಪು ಮಂಡಲ ವತಿಯಿಂದ ಹಾಗೂ 2.45ಕ್ಕೆ ಪರ್ಕಳ ಪೇಟೆಯಲ್ಲಿ ಉಡುಪಿ ನಗರ ಮಂಡಲ ವತಿಯಿಂದ ಸ್ವಾಗತಿಸಲಾಗುವುದು.
ಸಚಿವರು ಸಂಜೆ 5.30ಕ್ಕೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವರು. ಬಳಿಕ ಸಂಜೆ 6 ಗಂಟೆಗೆ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.