ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಮಾಸ್ಕ್, ಸ್ಯಾನಿಟೈಜರ್, ಫೇಸ್ ಶೀಲ್ಡ್, ಆಕ್ಸಿಮೀಟರ್ ವಿತರಣೆ

ಉಡುಪಿ: ಸೇವಾ ಹಿ ಸಂಘಟನ್ ಧ್ಯೇಯ ವಾಕ್ಯದಡಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಎರಡನೇ ವರ್ಷದ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರ್ವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೂಡುಬೆಟ್ಟು ಆರೋಗ್ಯ ಕೇಂದ್ರದಲ್ಲಿ ಇಂದು ಮಾಸ್ಕ್, ಸ್ಯಾನಿಟೈಜರ್, ಫೇಸ್ ಶೀಲ್ಡ್ ಹಾಗೂ ಆಕ್ಸಿಮೀಟರ್ ವಿತರಣೆ ಕಾರ್ಯಕ್ರಮ ನಡೆಯಿತು.

ಅದೇ ರೀತಿ ಕುತ್ಯಾರುವಿನಲ್ಲಿ ಸೀಲ್ ಡೌನ್ ಆದಂತಹ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಅವರಿಗೆ ಆಕ್ಸಿಮೀಟರ್ ಹಾಗೂ ಮಾಸ್ಕ್ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ ಉಪ್ಪುಂದ, ವಿನೋದ್ ಶಾಂತಿನಿಕೇತನ್ , ರಾಜ್ಯ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರಜ್ವಲ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕುಮಾರ್ , ಕಾರ್ಯದರ್ಶಿಗಳಾದ ಅಭಿಜಿತ್ ಸುವರ್ಣ, ಸತೀಶ್ ಪೂಜಾರಿ ಉದ್ಯಾವರ, ಕಾಪು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಕಾರ್ಯದರ್ಶಿ ಸೋನು ಪಾಂಗಳ, ಶಿರ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರವೀಣ್ ಪೂಜಾರಿ, ಕುತ್ಯಾರು ಪಂಚಾಯತ್ ಅಧ್ಯಕ್ಷೆ ಲತಾ ಆಚಾರ್ಯ ಮತ್ತು ಪಕ್ಷದ ಹಿರಿಯರು ಕಾರ್ಯಕರ್ತರು ಉಪಸ್ಥಿತರಿದರು.