ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಅವರು ಆಯ್ಕೆಯಾಗಿದ್ದಾರೆ.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಜ್ಯೋತಿ ಹೆಬ್ಬಾರ್ ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.












