ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ: ಇಂದಿನ ವಿವರ

ಉಡುಪಿ: ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಅನ್ ಲಾಕ್ ಬಳಿಕ ಮತ್ತೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 940ಕ್ಕೆ ಏರಿಕೆ ಕಂಡಿದೆ.

ಉಡುಪಿ‌ ತಾಲೂಕಿನಲ್ಲಿ 67, ಕುಂದಾಪುರ ತಾಲೂಕಿನಲ್ಲಿ 52 ಹಾಗೂ ಕಾರ್ಕಳ ತಾಲೂಕಿನಲ್ಲಿ 30 ಮಂದಿಯಲ್ಲಿ ಸೋಂಕು ಕಂಡುಬಂದಿದೆ.
ಜೂನ್ 29ರಂದು 2380 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದ್ದು, 88 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಎರಡನೇ ಅಲೆಯಲ್ಲಿ ಈವರೆಗೆ 314995 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 42828 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 41685 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 203 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಮೂರು ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.