ಉಡುಪಿ: ನಾಳೆ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್ ಭೋಜೆಗೌಡ, ಡಾ.ತೇಜಸ್ವಿನಿ ಗೌಡ, ಡಾ.ವಿ.ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಹಾಗೂ  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಭಾಗವಹಿಸಲಿರುವರು.