ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಉಡುಪಿಯ ಶಾಮಿಲಿ ಸಭಾಂಗಣದಲ್ಲಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಠಾಣೆಗಳಿಂದ
9 ಮಹಿಳಾ ತಂಡಗಳು ಭಾಗವಹಿಸಿದ್ದವು. ಕೆಲಸದ ಒತ್ತಡದಿಂದ ಕೊಂಚ ರಿಲೀಫ್ ಪಡೆದುಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿಗಳು, ತಮ್ಮ ತಂಡದ ಜೊತೆಗೆ ರಂಗೋಲಿ ಬಿಡಿಸಿ ಸಂಭ್ರಮಿಸಿದರು. ಮಹಿಳಾ ಸಿಬ್ಬಂದಿ ಬಿಡಿಸಿದ ರಂಗೋಲಿ ಎಲ್ಲರ ಗಮನಸೆಳೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ರಂಗೋಲಿಗಳನ್ನು ವೀಕ್ಷಿಸಿ, ಮಹಿಳಾ ಸಿಬ್ಬಂದಿಯ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನೂತನ ಎಸ್ಪಿ ಹರಿರಾಮ್ ಶಂಕರ್ ಅವರು ಪೊಲೀಸ್ ಸಿಬ್ಬಂದಿಗಳಿಗೆ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದಾರೆ. ಸಿಬ್ಬಂದಿಗಳ ಫಿಟ್ನೆಸ್ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿಯೂ ಹಲವಾರು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇದೀಗ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿ ಸಿಬ್ಬಂದಿಗಳ ಕೆಲಸದ ಒತ್ತಡವನ್ನು ಕೊಂಚ ಕಡಿಮೆ ಮಾಡಿದ್ದಾರೆ.












