ಉಡುಪಿ ಜೂ1: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ – 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವoತೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.