ಉಡುಪಿ ಜಿಲ್ಲೆ: ಮೂರು ದಿನ ಭಾರೀ ಮಳೆಯ ನಿರೀಕ್ಷೆ, ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ, ಮೇ 29: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ.

ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (ಮೇ 29 ರಮಧಾಹ್ನದ ವರದಿಯಂತೆ) ಹಳದಿ ಅಲರ್ಟ್ ಘೋಷಿಸಲಾಗಿದೆ ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡoತೆ ಸೂಚನೆಗಳನ್ನು ನೀಡಲಾಗಿದೆ.

ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯಬಾರದು, ಮಕ್ಕಳು ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ , ಕಟ್ಟಡ/ಮರಗಳ ಕೆಳಗೆ ನಿಲ್ಲದೆ , ಸುರಕ್ಷಿತ ಸ್ಥಳಗಳಲ್ಲಿ ಇರಬೇಕು. ತುರ್ತು ಸೇವೆಗಾಗಿ ಟೋಲ್ ಫ್ರೀ ಸಂಖ್ಯೆ.1077 , ದೂ.ಸಂ. 0820-2574802 ಸಂಪರ್ಕಿಸುವoತೆ ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.