ಉಡುಪಿ: ಇಲ್ಲಿನ ಕರಾವಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪೂರ್ಣ ನಜ್ಜುಗುಜ್ಜಾಗಿ, ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಕಾರಿನಲ್ಲಿ ಚಾಲಕ ಮಾತ್ರ ಇದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಕಾರು ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಚಲಿಸುತ್ತಿತ್ತು. ಕಲ್ಯಾಣಪುರ ನಿವಾಸಿ ಆನಂದ್ ಪದ್ಮನಾಭನ್ ಚಲಾಯಿಸುತ್ತಿದ್ದು, ಅವರಿಗೆ ಯಾವುದೇ ಗಂಭೀರ ಗಾಯವಾಗಿಲ್ಲ. ಸ್ಥಳೀಯ ರಿಕ್ಷಾ ಚಾಲಕರು ಗಾಯಾಳುವನ್ನು ಮಣಿಪಾಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ ಸಂಚಾರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.