ಉಡುಪಿ: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಉಡುಪಿ ಏ.14: ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ, ಮಂಗಳವಾರ  ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಜಿ.ಜಗದೀಶ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಷನೆ ಸಲ್ಲಿಸಲಾಯಿತು.

ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ  ಕಿರಣ್ ಫಡ್ನೇಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.