ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕನ್ನಡ ಡಿಂಡಿಮ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಡುಪಿ: ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ ಮೇಲಿನ ಅಭಿರುಚಿ ವಿದ್ಯಾರ್ಥಿಗಳಿಗೆ ಇದ್ದರೆ ಮಾತ್ರ ನಮ್ಮ ನಾಡಿನ ಭಾಷೆ ಉಳಿಯಲು ಸಾಧ್ಯ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಕೇವಲ ಸಂಘ, ಸಂಸ್ಥೆಗಳ ಕಾರ್ಯ ಎಂದು ಭಾವಿಸದೆ ನಮ್ಮೆಲ್ಲರ ಆಧ್ಯ ಕರ್ತವ್ಯವಾಗ ಬೇಕು ಎಂದು ಸಮಾಜ ಕಾರ್ಯ ಉಪನ್ಯಾಸಕ ಡಾ ಗಣೇಶ್ ಪ್ರಸಾದ್ ನಾಯಕ್ ಅಬಿಪ್ರಾಯಪಟ್ಟರು.

ಇವರು ಕನ್ನಡ ಮತ್ತು ಸಂಸ್ಕೃತ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಮತ್ತು ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇದರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ‘ಕನ್ನಡ ಡಿಂಡಿಮ’ ಪ್ರಯುಕ್ತ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಮತ್ತು ಯುವ ಪ್ರತಿಭೆಗಳಿಗೆ ನನ್ನ ನೆಚ್ಚಿನ ಸಾಹಿತಿ, ಆಶುಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆಯ ಅಧ್ಯಕ್ಷರು ಡಾ. ಗಣನಾಥ ಎಕ್ಕಾರು ಮಾತನಾಡಿ ಡಾ. ಶಿವರಾಮ ಕಾರಂತರು ಮತ್ತು ಅವರ ಚಿಂತನೆಗಳು ಉಡುಪಿ, ದಕ್ಷಿಣ ಕನ್ನಡಕ್ಕೆ ಮಾತ್ರ ಸೀಮಿತವಾಗಬಾರದು. ಕಾರಂತರು ಕನ್ನಡದ ಆಸ್ತಿ, ರಾಜ್ಯದ ಉದ್ದಗಲಕ್ಕೂ ಅವರ ಚಿಂತನೆಗಳು ತಲುಪಬೇಕಾಗಿದೆ ಎಂಬ ಆಶಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉದಯವಾಣಿ ದಿನಪತ್ರಿಕೆಯ ನಿವೃತ್ತ ಹಿರಿಯ ಉಪಸಂಪಾದಕರಾದ ನಿತ್ಯಾನಂದ ಪಡ್ರೆ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸೋಜನ್ ಕೆ.ಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಪ್ರೊ. ಶ್ರೀಮತಿ ಅಡಿಗ, ಆಂಗ್ಲ ಭಾಷ ವಿಭಾಗದ ಮುಖ್ಯಸ್ಥರು ಶ್ರೀಮತಿ ರೇಖಾ, ಸಹ ಪ್ರಾಧ್ಯಾಪಕರಾದ ರಮ್ಯ ಐತಾಳ್, ಕನ್ನಡ ವಿಭಾಗದ ಉಪನ್ಯಾಸಕರಾದ ಚಂದ್ರ ಹಾಗೂ ಶ್ರೀಮತಿ ತ್ರಿವೇಣಿ ಮತ್ತು ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆಯ ಸದಸ್ಯರಾದ ಜಿ ಎಂ ಶರೀಫ್ ಹೂಡೆ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ಪ್ರಸನ್ನ ಪಿ. ಬಿ ಕಾರ್ಯಕ್ರಮವನ್ನು ನಿರೂಪಿಸಿ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆಯ ಸದಸ್ಯ ಸತೀಶ್ ಕೊಡವೂರು ವಂದಿಸಿದರು.