ಅತ್ಯಾಚಾರ ಹತ್ಯೆ ಖಂಡಿಸಿ‌; ನ್ಯಾಯಕ್ಕಾಗಿ ಆಗ್ರಹಿಸಿ ಹಿಂದೂ‌ ಸಂಘಟನೆಗಳಿಂದ ರಾಷ್ಟ್ರಪತಿಗೆ ಮನವಿ

ಉಡುಪಿ: ತೆಲಂಗಾಣಾದಲ್ಲಿ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮತ್ತು ತಮಿಳುನಾಡಿನ ರೋಜಾ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ವಿಶ್ವ ಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಉಡುಪಿ ಜಿಲ್ಲೆಯ ವತಿಯಿಂದ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು‌.
ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲಾಧ್ಯಕ್ಷ ಪ್ರಮೋದ್ ಮಂದಾರ್ತಿ, ಜಿಲ್ಲಾ ಉಪಾಧ್ಯಕ್ಷೆ ಸುಪ್ರಭಾ ಆಚಾರ್ಯ, ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಮಹೇಶ್ ಬೈಲೂರು, ವಿಶ್ವ ಹಿಂದು ಪರಿಷದ್ ಬ್ರಹ್ಮಾವರ ಪ್ರಖಂಡ ಅಧ್ಯಕ್ಷ ಯತೀಶ್ ವಾರಂಬಳ್ಳಿ, ಕಾಪು ಪ್ರಖಂಡ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.