ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ UDUPI E-SAND APP ನ ಮೂಲಕ ಪೂರೈಸಲು ತೀರ್ಮಾನಿಸಲಾಗಿರುತ್ತದೆ.
ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು UDUPI E-SAND APP ಮುಖಾಂತರ ಪಡೆಯಬಹುದಾಗಿದ್ದು, ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2572 333, 63667 45888, 63640 24555 Sand App Contact No: 63667 45888, 63640 24555 (App related queries) 63668 71888 (Accounts related queries) ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂವಿಜ್ಞಾನಿ/ ಅನುಷ್ಠಾನಾಧಿಕಾರಿ, ಜಿಲ್ಲಾ 07 ಸದಸ್ಯರ ಸಮಿತಿ ಉಡುಪಿ ಜಿಲ್ಲೆ ಅವರ ಪ್ರಕಟಣೆ ತಿಳಿಸಿದೆ.