ಉಡುಪಿ:ಅ.26, 27ರಂದು ಉಚಿತ ಶ್ರವಣ ತಪಾಸಣಾ ಶಿಬಿರ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ, ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ 317ಸಿ, ಟೀಮ್ ಈಶ್ವರ್ ಮಲ್ಪೆ ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅ. 26 ಮತ್ತು 27 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ ನಡೆಯಲಿದ್ದು, ಅ.27ರಂದು ಬೆಳಿಗ್ಗೆ 10 ಗಂಟೆಗೆ ಫಲಾನುಭವಿಗಳಿಗೆ ಶ್ರವಣಯಂತ್ರಕ್ಕೆ ಸಹಾಯಧನ ಮತ್ತು ಶ್ರವಣಯಂತ್ರ ವಿತರಣಾ ಸಮಾರಂಭ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902344399/9964583433 ಅನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.