ಉಡುಪಿ: ವೃದ್ಧ ನಾಪತ್ತೆ.

ಉಡುಪಿ ಏಪ್ರಿಲ್ 02: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ನಿವಾಸಿ ದೇವದಾಸ್ ಪೂಜಾರಿ (75) ಎಂಬ ವೃದ್ಧರು 2024 ರ ಡಿಸೆಂಬರ್ 1 ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೇಳಿ
ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬAಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ
ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.