ಉಡುಪಿ: ಬಂಟಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೩ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡಿಗೆ ಸಮಾರಂಭವು ದಿನಾಂಕ ೦೯ ಮೇ ೨೦೨೬ ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಡಾ. ರಾಧಾಕೃಷ್ಣ ಎಸ್ ಐತಾಳ್ ಇವರು ಮಾತನಾಡಿ ವಿದ್ಯಾರ್ಥಿಗಳು ಕಾಲೇಜು ಹಾಗೂ ಉಪನ್ಯಾಸಕರ ಬಗ್ಗೆ ವ್ಯಕ್ತಪಡಿಸಿದಸಕಾರಾತ್ಮಕ ಅಭಿಪ್ರಾಯದ ಬಗ್ಗೆ ಸಂತಸ ವ್ಯಕ್ತ ಪಡಿಸಿದರು ಮತ್ತು ವಿದ್ಯಾರ್ಥಿಗಳ ವಿನಯ ಶೀಲತೆಯು ಅವರ ವ್ಯಕ್ತಿತ್ವ ಮತ್ತು ಪದವಿಯಮೌಲ್ಯವನ್ನು ಹೆಚ್ಚಿಸುತ್ತದೆ ಎಂದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸದಾ ವಿನಯ ಮತ್ತು ಸರಳತೆಯನ್ನು ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಇದರ ಕಾರ್ಯದರ್ಶಿಗಳಾದ ರತ್ನಕುಮಾರ್ ಇವರು ತಮ್ಮ ಉದ್ಯೋಗ ಜೀವನದ ಅನುಭವವನ್ನು ಹಂಚಿಕೊoಡರು, ವಿದ್ಯಾರ್ಥಿಗಳು ಉದ್ಯಮಿಗಳಾಗಿ ಇತರರಿಗೆಉದ್ಯೋಗಾವಕಾಶಗಳನ್ನು ನೀಡಬೇಕು ಎಂದರು, ಜೊತೆಗೆ ಸಂಸ್ಥೆಗೆ ಬಲಿಷ್ಠ ಹಳೆ ವಿದ್ಯಾರ್ಥಿಗಳ ಸಂಘವನ್ನು ನಿರ್ಮಿಸುವ ಅಗತ್ಯತೆಯಿದ್ದು ಸಂಸ್ಥೆಯೊoದಿಗೆ ಕೈ ಜೋಡಿಸಬೇಕು ಎಂದರು.

ಸoಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್ ಮಾತನಾಡಿ ಅಂತಿಮ ವರ್ಷದ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಯಶಸ್ಸನ್ನು ಕಾಣಲು ಹೆಚ್ಚು ಶ್ರಮ ಪಡಬೇಕೆಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಅತ್ಯುತ್ತಮ ಪ್ರಾಜೆಕ್ಟ್ಗಳಿಗೆ ಬಹುಮಾನವನ್ನು ನೀಡಲಾಯಿತು.