ಉಡುಪಿ:ಫೆಲೋಶಿಪ್ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ
ಮಾಸಿಕ ವ್ಯಾಸಾಂಗ ವೇತನ / ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಫಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವ
ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ 2026 ರ ಜನವರಿ 9 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ ದೂ.ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.