ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ಐದು ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಕೊರೊನಾ ಹೆಲ್ತ್ ಬುಲೆಟಿನ್ ಸಂಬಂಧಿಸಿ ಇಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಮುಂಬೈನಿಂದ ಜಿಲ್ಲೆಗೆ ಬಂದು ಕ್ವಾರಂಟೈನ್ ನಲ್ಲಿ ಇರುವ 53 ವರ್ಷದ ಪುರುಷ, 29 ವರ್ಷದ ಮಹಿಳೆ, 24 ವರ್ಷದ ಯುವಕ, 8 ವರ್ಷದ ಬಾಲಕ ಹಾಗೂ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿರುವ ಚಿತ್ರದುರ್ಗದ 17 ವರ್ಷದ ಯುವತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಸೋಂಕಿತರೆಲ್ಲರನ್ನು ನಗರದ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಳಿದ್ದಾರೆ.