ಉಡುಪಿ: ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರಾಜ್ಯ ಕಂಡ ಹಿಂದುಳಿದ ವರ್ಗದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ನಾಯಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್ ಅವರ ನಿವಾಸದಲ್ಲಿ ಪುಷ್ಪಾಂಜಲಿ ಕಾರ್ಯಕ್ರಮದೊಂದಿಗೆ ಗೌರವ ನಮನ ಸಲ್ಲಿಸಲಾಯಿತು.
ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್, ಮನೋಜ್ ಕರ್ಕೇರ, ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ, ಕೋಶಾಧಿಕಾರಿ ಸತೀಶ್ ಪೂಜಾರಿ ಕುಕ್ಕಿಕಟ್ಟೆ, ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದಯಾನಂದ ದೇವಾಡಿಗ ಮುಂತಾದವರು ಭಾಗವಹಿಸಿದ್ದರು.