ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ
ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲು ಇಚ್ಛಿಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ https://sevasindhuservices.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050370006 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.












