ಉಡುಪಿ:ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮ

ಉಡುಪಿ: ಮೈಸೂರಿನ ಕೇಂದ್ರ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ ಸಂಸ್ಥೆಯ ವತಿಯಿಂದ “ಮೆಷಿನ್ ಆಪರೇಟರ್ & ಪ್ರೋಗ್ರಾಮರ್ – ಸಿ.ಎನ್.ಸಿ ಮಿಲ್ಲಿಂಗ್” ವಿಷಯದಲ್ಲಿ ಉಚಿತ ಮೂರುವರೆ ತಿಂಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆ ಅಡಿ ಆಯೋಜಿಸಲಾಗಿದ್ದು, ತರಬೇತಿಯಲ್ಲಿ ಉಚಿತ ಆಹಾರ ಹಾಗೂ ವಸತಿ ಸೌಲಭ್ಯ ಒದಗಿಸಲಾಗುವುದು.

ತರಬೇತಿಯು ಅಕ್ಟೋಬರ್ 23 ರಿಂದ ಪ್ರಾರಂಭವಾಗಲಿದ್ದು, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆ ಹೊಂದಿರುವ ಆಸಕ್ತರು ತರಬೇತಿಯಲ್ಲಿ ಭಾಗವಹಿಸಬಹುದಾಗಿದ್ದು, ತರಬೇತಿಗೆ ದಾಖಲಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ನೇಮಕಾತಿಯ ಮೂಲಕ ಉದ್ಯೋಗಾವಕಾಶದ ಖಚಿತತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಿಪೆಟ್, 437/ಎ, ಹೆಬ್ಬಾಳ ಕೈಗಾರಿಕಾ ಪ್ರದೇಶ, ಮೈಸೂರು ದೂ.ಸಂಖ್ಯೆ: 9480253024, 9741719645 ಅಥವಾ
ವೆಬ್‌ಸೈಟ್ www.cipet.gov.in. ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.