ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಅನಾಥ ಶವದ ಅಂತ್ಯಸಂಸ್ಕಾರವನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು, ಗೌರಯುತವಾಗಿ ಬೀಡಿನಗುಡ್ಡೆ ದಫನಭೂಮಿಯಲ್ಲಿ ಶುಕ್ರವಾರ ನಡೆಸಿದರು.
ನಗರ ಪೊಲೀಸ್ ಠಾಣೆಯ ಎ.ಎಸ್.ಐ ಹರೀಶ್ ಕೆ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರು, ಕಾನೂನು ಪ್ರಕ್ರಿಯೆ ನಡೆಸಿದರು. ಪ್ರದೀಪ್ ಅಜ್ಜರಕಾಡು, ಸೋನಿಯಾ ಅಜ್ಜರಕಾಡು, ಪ್ಲವರ್ ವಿಷ್ಣು, ಅಣ್ಣಪ್ಪ ಪೂಜಾರಿ ಕರಂಬಳ್ಳಿ, ಸುಶೀಲಾ ರಾವ್ ಉಡುಪಿ ಸಹಕರಿಸಿದರು.
ಸಮಾಜಸೇವಕರು ಕಳೆದ ಜುಲೈ 27 ರಂದು, ನಗರದ ಸಾರ್ವಜನಿಕ ಸ್ಥಳದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದರು. ರೋಗಿಯು ಚಿಕಿತ್ಸೆಗೆ ಸ್ಪಂದಿಸದೆ, ನವಂಬರ್ 26 ರಂದು ಮೃತಪಟ್ಟಿದ್ದರು. ಶವವನ್ನು ಜಿಲ್ಲಾಸ್ಪತ್ರೆಯ ಶವರಕ್ಷಣಾ ಘಟಕದಲ್ಲಿ ರಕ್ಷಿಸಿಡಲಾಗಿತ್ತು. ಮಾಧ್ಯಮ ಪ್ರಕಟಣೆ ನೀಡಿ, 46 ದಿನಗಳು, ಕಳೆದರೂ ಸಂಬಂಧಿಕರು ಸಂಪರ್ಕಿಸದೆ ಇರುವುದರಿಂದ ಕಾನೂನಿನಂತೆ ಅಂತ್ಯಸಂಸ್ಕಾರ ನಡೆಸಲಾಯಿತು.