ಉಡುಪಿ ಮಾ.31: ಕೋರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ,ಮಾರ್ಚ್ 23 ರಿಂದ 31 ರ ವರೆಗೆ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ದೈನಂದಿನ ಪ್ರಾರ್ಥನೆಗಳನ್ನು (ಶುಕ್ರವಾರದ ಜುಮ್ಮಾ ಪ್ರಾರ್ಥನೆ ಸೇರಿದಂತೆ) ನಿರ್ಬಂದಿಸಿ ಆದೇಶ ಹೊರಡಿಸಲಾಗಿತ್ತು, ಸರ್ಕಾರವು ರಾಜ್ಯಾದ್ಯಂತ ಏಪ್ರಿಲ್ 14 ರ ವರೆಗೆ ಲಾಕ್ ಡೌನ್ ಮುಂದುವರೆಸಿರುವುದರಿಂದ, ಜಿಲ್ಲೆಯಲ್ಲಿ ಕೋರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ಆದೇಶದವರೆಗೂ, ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ದೈನಂದಿನ ಪ್ರಾರ್ಥನೆಗಳನ್ನು (ಶುಕ್ರವಾರದ ಜುಮ್ಮಾ ಪ್ರಾರ್ಥನೆ ಸೇರಿದಂತೆ) ಸಾರ್ವಜನಿಕರ ಹಿತದೃಷ್ಠಿಯಿಂದ ನಿರ್ಬಂದಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.