ಉಡುಪಿ ಡಿಸೆಂಬರ್ 09 (ಕ.ವಾ): ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನ ಉದ್ಘಾಟನಾ ಕಾರ್ಯಕ್ರಮವು ಡಿಸೆಂಬರ್ 11 ರಂದು ಮಧ್ಯಾಹ್ನ 3.30 ಕ್ಕೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಗೋಪಾಡಿ ರುಕ್ಮಿಣಿ ಶ್ರೀನಿವಾಸ
ರಂಗಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭೀಮನಕಟ್ಟೆ ಭೀಮಸೇತು ಮುನಿವೃಂದ ಮಠದ ಶ್ರೀ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ದಿವ್ಯ ಉಪಸ್ಥಿತಿ
ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಉಪನಿರ್ದೇಶಕ ಲೋಕೇಶ್ ಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಅಭಿವೃದ್ಧಿ) ಉಪನಿರ್ದೇಶಕ ಅಶೋಕ್ ಕಾಮತ್, ಸಮಾಜ ಸೇವಕ ಎಮ್. ದಿನೇಶ್ ಹೆಗ್ಡೆ, ಉಪನ್ಯಾಸಕ ಹೆಚ್.ಬಿ ಮಂಜುನಾಥ್, ಮಣೂರು ಪಡುಕೆರೆ ಗೀತಾನಂದ ಫೌಂಡೇಶನ್ ಪ್ರವಚರ್ತಕ ಆನಂದ ಸಿ ಕುಂದರ್, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನ ಸಂಸ್ಥಾಪಕ ಗೋಪಾಡಿ ಶ್ರೀನಿವಾಸ ರಾವ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

















